alex Certify ಕುರುಬ ಸಮುದಾಯ ST ಮೀಸಲಾತಿ ಹೋರಾಟದ ಸಭೆಯಲ್ಲಿ ಅಚ್ಚರಿ ಹೇಳಿಕೆ ನೀಡಿದ ಎಂಟಿಬಿ ನಾಗರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುರುಬ ಸಮುದಾಯ ST ಮೀಸಲಾತಿ ಹೋರಾಟದ ಸಭೆಯಲ್ಲಿ ಅಚ್ಚರಿ ಹೇಳಿಕೆ ನೀಡಿದ ಎಂಟಿಬಿ ನಾಗರಾಜ್

ಬೆಂಗಳೂರು: ನಾವು ಕಂಬಳಿ ಬೀಸಿದಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆದರು ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್.ಟಿ. ಸಮುದಾಯಕ್ಕೆ ಸೇರಿಸುವ ವಿಚಾರಕ್ಕೆ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಸಚಿವರಾಗಲು ನಮ್ಮ ನಾಯಕರ ಬೆಂಬಲ ಕಾರಣ ಎಂದು ಹೇಳಿದ್ದಾರೆ.

ಬಿಜೆಪಿ ಮೇಲೆ ನಂಬಿಕೆ ಇಟ್ಟು ನಾವು ಪಕ್ಷಕ್ಕೆ ಬಂದಿದ್ದೇವೆ. ಇದನ್ನು ಗಮನದಲ್ಲಿಟ್ಟುಕೊಂಡು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ನಾವು ಕಾರಣ. ಕುರುಬ ಸಮುದಾಯದ ಬೆಂಬಲದಿಂದ ಅವರು ಸಿಎಂ ಆಗಿದ್ದಾರೆ. ಹೆಚ್. ವಿಶ್ವನಾಥ್, ಆರ್. ಶಂಕರ್ ಮತ್ತು ನಾನು ಬೆಂಬಲಿಸಿದ್ದರಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಸಭೆಯನ್ನು ರಾಜಕೀಯಕ್ಕೆ ಬಳಸಿಕೊಂಡು ಸಚಿವ ಸ್ಥಾನಕ್ಕೆ ಪರಿಗಣಿಸಲು ಸಿಎಂಗೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...