ಬೆಳಗಾವಿ: ಕೊರೊನಾ ಲಾಕ್ಡೌನ್ ಸಂಕಷ್ಟದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಆರ್ಥಿಕ ನೆರವು ಘೋಷಿಸಲಾಗಿದೆ. ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಪರಿಹಾರ ನೀಡಲಾಗುವುದು. ಆದರೆ, 5 ಸಾವಿರ ರೂಪಾಯಿ ಪರಿಹಾರ ಧನ ಪಡೆಯಲು ಕಾರ್ಮಿಕರಲ್ಲದವರೂ ಕೂಡ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕಾರ್ಮಿಕ ಕಾರ್ಡ್ ನವೀಕರಿಸದಿದ್ದರೂ ಪರಿಹಾರ ಧನ ನೀಡಲಾಗುವುದು. ಪರಿಹಾರ ಘೋಷಣೆಯಾದ ನಂತರ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡವರಿಗೆ ನೆರವು ದೊರೆಯುವುದಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಲಾಕ್ಡೌನ್ ಸಂಕಷ್ಟದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಪರಿಹಾರ ರೂಪದಲ್ಲಿ 5000 ರೂಪಾಯಿ ಪರಿಹಾರ ನೀಡಲಾಗುವುದು. ಆದರೆ ಪರಿಹಾರ ಘೋಷಣೆಯಾದ ನಂತರ ಹೆಚ್ಚಿನ ಸಂಖ್ಯೆಯ ಜನ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಇದೊಂದು ದೊಡ್ಡ ಉದ್ಯೋಗವಾಗಿದೆ. ಹಾವೇರಿ ಜಿಲ್ಲೆಯಲ್ಲಿ 30 ಸಾವಿರ ಜನ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡಿದ್ದು, ರಾಜ್ಯದ ಹಲವೆಡೆಯೂ ಇದೇ ರೀತಿ ಕಾರ್ಡ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಪರಿಹಾರಧನ ಘೋಷಣೆ ಮಾಡಿದ ನಂತರದಲ್ಲಿ ಕಾರ್ಮಿಕ ಕಾರ್ಡ್ ಮಾಡಿಸಿಕೊಂಡವರಿಗೆ ನೆರವು ದೊರೆಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.