alex Certify ಮೋಜಿಗಾಗಿ ಬಂದ ಯುವಕರು, ಯುವತಿಯರು: ನಡೆದೇ ಹೋಯ್ತು ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಜಿಗಾಗಿ ಬಂದ ಯುವಕರು, ಯುವತಿಯರು: ನಡೆದೇ ಹೋಯ್ತು ನಡೆಯಬಾರದ ಘಟನೆ

ಬೆಂಗಳೂರು: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಬೆಂಗಳೂರು ರಾಮಮೂರ್ತಿ ನಗರದ ಮೂವರು ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜಲು ಇಳಿದ ವೇಳೆ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಘಟನೆ ನಡೆದಿದೆ. 4 ಬೈಕುಗಳಲ್ಲಿ ಬಂದಿದ್ದ ನಾಲ್ವರು ಯುವಕರು ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಮುಳುಗುತ್ತಿದ್ದ ಒಬ್ಬನನ್ನು ರಕ್ಷಿಸಲು ಹೋದ ಮತ್ತಿಬ್ಬರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ.

ರಾಜು(19), ಚಂದ್ರು(20), ನವೀನ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ನೀರುಪಾಲಾದವರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...