ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಪೊಲೀಸರು ಕೇಸ್ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಬೆಳಗಾವಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹೀಗೆ ಕೇಸ್ ದಾಖಲಿಸಿ ಮಹಿಳೆಯರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಸೋಲುವ ಭಯದಲ್ಲಿ ಇಂತಹ ಕೇಸ್ ದಾಖಲಿಸಿ ಬೆದರಿಸುವ ಪ್ರಯತ್ನ ಮಾಡಲಾಗಿದೆ ಎಂದು ದೂರಿದ್ದಾರೆ.
ಇನ್ನು ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಕುಸುಮಾ ವಿರುದ್ಧ ದಾಖಲಿಸಿರುವ ದೂರಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಬಿಜೆಪಿ ಅಭ್ಯರ್ಥಿ ಪರವಾಗಿ ಆರ್.ಆರ್. ನಗರ ಠಾಣೆ ಇನ್ಸ್ ಪೆಕ್ಟರ್ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.