ಬಳ್ಳಾರಿ: 2019-20ನೇ ಸಾಲಿನ ಎಸ್.ಎಫ್.ಸಿ ಅನುದಾನದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಹಾಗೂ ಸಿ.ಸಿ.ಎ ಯೋಜನೆಗಳಡಿ ಕುರೇಕುಪ್ಪ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪ.ಜಾ/ಪ.ಪಂ ಹಾಗೂ ಇತರ ಹಿಂದುಳಿದ ಜನಾಂಗದ ಎಂ.ಬಿ.ಬಿ.ಎಸ್ ಮತ್ತು ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ವೈಯಕ್ತಿಕ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಆಸಕ್ತ ಫಲಾನುಭವಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಲ್ಲಾ ವರ್ಷದ ಅಂಕಪಟ್ಟಿಗಳು, 2 ಭಾವಚಿತ್ರ, ಪಡಿತರ ಚೀಟಿ, ಆಧಾರ್/ಐಡಿ ಕಾರ್ಡ್, ಪ್ರಸಕ್ತ ವ್ಯಾಸಂಗ ಮಾಡುತ್ತಿರುವ ಪ್ರಮಾಣ ಪತ್ರ ಹಾಗೂ ಸಂಬಂಧ ಪಟ್ಟ ಇಲಾಖೆಯಿಂದ ಪತ್ರದ ದಾಖಲೆಯೊಂದಿಗೆ ಆ.12ರೊಳಗಾಗಿ ಕುರೇಕುಪ್ಪದ ಪುರಸಭೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್ಸೈಟ್ http//eproc.karnataka.gov.in, www.kurekuppatown.mrc.gov.in ಗಮನಿಸಬಹುದು ಎಂದು ತಿಳಿಸಿದ್ದಾರೆ.