ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಚೇತರಿಕೆಗೆ ಹಾರೈಸಿ ರಾಜ್ಯಪಾಲ ವಜೂಭಾಯಿ ವಾಲಾ ಪತ್ರ ಬರೆದಿದ್ದಾರೆ. ಮಾಧ್ಯಮಗಳ ಮೂಲಕ ನಿಮಗೆ ಕೊರೊನಾ ಸೋಂಕು ತಗಲಿರುವ ವಿಚಾರ ಗೊತ್ತಾಯಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೀವು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಪತ್ರ ಬರೆದು ಚೇತರಿಕೆಗೆ ಹಾರೈಸಿದ್ದಾರೆ.