ಕಲಬುರಗಿ: ನಿವೃತ್ತ ಸರ್ಕಾರಿ ನೌಕರರು ಪ್ರತಿ ವರ್ಷ ಜೀವನ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಇದಕ್ಕಾಗಿ ನಿವೃತ್ತ ಸರ್ಕಾರಿ ನೌಕರರು ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗಿದೆ.
ಇನ್ನು ಮುಂದೆ ಮನೆಬಾಗಿಲಿಗೆ ಟಪಾಲು ತರುವ ಅಂಚೆಯಣ್ಣ(ಪೋಸ್ಟ್ ಮ್ಯಾನ್) ಅವರು ನಿವೃತ್ತ ಸರ್ಕಾರಿ ನೌಕರರ ಫೋಟೋ ಹಾಗೂ ಬೆರಳಚ್ಚನ್ನು ಪಡೆಯುವ ಮೂಲಕ ಈ ಜೀವನ ಪ್ರಮಾಣಪತ್ರ ಪಡೆಯಲಿದ್ದಾರೆ ಎಂದು ಕಲಬುರಗಿ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಈ ಸೌಲಭ್ಯ ದೊರೆಯಲಿದ್ದು, ಎಲ್ಲಾ ನಿವೃತ್ತ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಅಂಚೆ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-263800ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.