alex Certify ಆಂಬುಲೆನ್ಸ್ ನಲ್ಲಿ ಮದ್ಯ ಸಾಗಿಸುತ್ತಿದ್ದವರು ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಬುಲೆನ್ಸ್ ನಲ್ಲಿ ಮದ್ಯ ಸಾಗಿಸುತ್ತಿದ್ದವರು ಅಂದರ್

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಆಂಬುಲೆನ್ಸ್ ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಆಂಬುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಷಿಯನ್ ಸಂತೋಷ್ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಜೀವನ್ ಮತ್ತು ಗಿರೀಶ್ ಬಂಧಿತ ಆರೋಪಿಗಳು. ಇವರು ಆಂಬುಲೆನ್ಸ್ ನಲ್ಲಿ ಮದ್ಯ ಸಾಗಿಸಿ ಚಿತ್ರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಆಂಬುಲೆನ್ಸ್ ನಿಂದ ಮಾರುತಿ ಓಮ್ನಿಗೆ ಮದ್ಯದ ಬಾಕ್ಸ್ ಗಳನ್ನು ಇಡುವ ವೇಳೆ ಪೊಲೀಸರು ಗಮನಿಸಿದ್ದಾರೆ.

ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು 60 ಸಾವಿರ ರೂಪಾಯಿ ಮೌಲ್ಯ ಮದ್ಯ, ಅಂಬುಲೆನ್ಸ್, ಮಾರುತಿ ಒಮ್ನಿ ವಶಕ್ಕೆ ಪಡೆಯಲಾಗಿದೆ. ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...