ಬೆಂಗಳೂರು: ಕೊರೋನಾ ಸೋಂಕು ತಡೆಗೆ ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಮುಂದಿನ ಭಾನುವಾರ ಕಂಪ್ಲೀಟ್ ಲಾಕ್ ಡೌನ್, ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ.
ಅದೇ ರೀತಿ ಮದ್ಯದಂಗಡಿಗಳನ್ನು ಪ್ರತಿ ಭಾನುವಾರ ಬಂದ್ ಮಾಡಲಾಗುವುದು. ಪ್ರತಿದಿನ ರಾತ್ರಿ 9 ಗಂಟೆಯ ಬದಲಿಗೆ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಿ ನಂತರ ಬಂದ್ ಮಾಡಲಾಗುವುದು.
ಜುಲೈ 5 ರಿಂದ ರಾಜ್ಯದಲ್ಲಿ ಪ್ರತಿ ಭಾನುವಾರ ಮದ್ಯ ಮಾರಾಟ ಇರುವುದಿಲ್ಲ. ಮದ್ಯ ಮಾರಾಟದ ಅವಧಿಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ. ರಾತ್ರಿ 9 ಗಂಟೆ ಬದಲಿಗೆ 8 ಗಂಟೆಯಿಂದಲೇ ಮದ್ಯ ಮಾರಾಟ ಸ್ಥಗಿತವಾಗಲಿದೆ. ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ.
ಪ್ರತಿದಿನ ನೈಟ್ ಕರ್ಫ್ಯೂ, ಪ್ರತಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಮದ್ಯ ಮಾರಾಟ ಇರುವುದಿಲ್ಲ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗುವುದು ಎಂದು ಹೇಳಲಾಗಿದೆ.