alex Certify ಲಾಕ್ ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‍ಡೌನ್ ಪ್ರಾರಂಭದ ಸಂಧರ್ಭದಲ್ಲಿ ಲಭ್ಯವಿದ್ದ ಮದ್ಯದ ಸ್ಟಾಕ್ ಹಾಗೂ ಲಾಕ್‍ಡೌನ್ ಅಂತ್ಯದಲ್ಲಿ ಲಭ್ಯವಿದ್ದ ಸ್ಟಾಕ್‍ನಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇಂದು ಸಭೆಯಲ್ಲಿ ಹಾಜರಿದ್ದ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತಾಗಿ ತಿಳಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಸೇರಿದಂತೆ ಅನೇಕ ಅನಪೇಕ್ಷಣೀಯ ವ್ಯಾಪಾರ ವ್ಯವಹಾರಗಳು ನಡೆದಿದ್ದು ಮದ್ಯ, ಮದ್ಯದಂಗಡಿಗಳನ್ನು ಮತ್ತೆ ಪ್ರಾರಂಭಿಸುವವರೆಗೆ ಆಗಿರುವ ವ್ಯಾಪಾರ ಕಳ್ಳತನದ್ದೆ ಎಂದು ಸಭೆಯಲ್ಲಿ ಪಕ್ಷಬೇಧ ಮರೆತು ಸದಸ್ಯರು ಅಭಿಪ್ರಾಯ ಪಟ್ಟರೆಂದು ತಿಳಿಸಿದ್ದಾರೆ.

ಸಭೆಯಲ್ಲಿ ಹಾಜರಿದ್ದ ಅಬಕಾರಿ ಆಯುಕ್ತರು ಹಾಗೂ ಇತರ ಅಧಿಕಾರಿಗಳು ಸಂಪೂರ್ಣ ವಿವರಗಳನ್ನು ಒದಗಿಸದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಣಕಾಸು ಇಲಾಖೆಯ ಅದರಲ್ಲೂ ಅಬಕಾರಿ ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಹಲವಾರು ಟೀಕೆಗಳನ್ನು ಮಾಡಿದ್ದಾರೆ. ಡಿಸ್ಟಿಲರಿಗಳ ಮೂಲಗಳ ಮೂಲಕ ಮದ್ಯಸಾರ ಉತ್ಪಾದನೆ, ತಯಾರಿಕೆ ಹಾಗೂ ಉತ್ಪತ್ತಿಗಳ ಇಳುವರಿಗಳಲ್ಲಿ ವ್ಯತ್ಯಾಸವಾಗಿ ಸರ್ಕಾರಕ್ಕೆ ಸರ್ಕಾರಕ್ಕೆ ಸಾವಿರಾರು ಕೋಟಿ ಪ್ರತಿವರ್ಷ ನಷ್ಟವಾಗುತ್ತಿದೆ ಎಂದು ಹೇಳಲಾಗಿದೆ.

ಸಾರಾಯಿ ನಿಷೇಧ ಮಾಡಿದ ಮೇಲೆ, ಈ ಹಿಂದೆ ಸಾರಾಯಿ ಮಾರಾಟ ಮಾಡುತ್ತಿದ್ದ ಮಾರಾಟಗಾರರಿಗೆ ಯಾವುದೇ ಪುನರ್ವಸತಿ ಕಲ್ಪಿಸದಿರುವುದು, ಪರ್ಯಾಯ ವ್ಯವಸ್ಥೆ ಮಾಡದಿರುವುದರ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಹರಿಪ್ರಸಾದ್, ಕೆ.ಆರ್. ರಮೇಶ್ ಕುಮಾರ್, ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ಬಿ.ಸಿ. ನಾಗೇಶ್ ಮುಂತಾದವರು ಟೀಕಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...