ಕೋಲಾರ: ಲಾಕ್ ಡೌನ್ ಜಾರಿಯಾದ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಇರುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ನಾಳೆ ಸಂಜೆ ನಂತರ ಲಾಕ್ ಡೌನ್ ಜಾರಿಯಾದ ಪ್ರದೇಶಗಳಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗುವುದು. ಲಾಕ್ಡೌನ್ ಜಾರಿಯಾದ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ 1 ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ವಸ್ತು, ಸೇವೆ ಹೊರತಾಗಿ ಉಳೆದೆಲ್ಲಾ ಚಟುವಟಿಕೆ ಬಂದ್ ಆಗಲಿವೆ. ಅದೇ ರೀತಿ ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ.
ಈ ಕುರಿತಾಗಿ ಮಾತನಾಡಿದ ಅಬಕಾರಿ ಸಚಿವ ನಾಗೇಶ್, ನಾಳೆ ಸಂಜೆ ನಂತರ ಲಾಕ್ ಡೌನ್ ಜಾರಿಯಾದ ಪ್ರದೇಶದಲ್ಲಿ ಮದ್ಯ ಮಾರಾಟ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಒಂದು ವಾರ ಮದ್ಯ ಮಾರಾಟ ಬಂದ್ ಆಗಲಿರುವುದರಿಂದ ಈಗಾಗಲೇ ಸಾಕಾಗುವಷ್ಟು ಮದ್ಯವನ್ನು ಬಹುತೇಕರು ಖರೀದಿಸಿ ಇಟ್ಟುಕೊಂಡಿದ್ದಾರೆ.