alex Certify ಮದ್ಯದಂಗಡಿ ಓಪನ್ ಖುಷಿಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ಮದ್ಯ ಖರೀದಿಗೆ ಇರುತ್ತಾ ಮಿತಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದಂಗಡಿ ಓಪನ್ ಖುಷಿಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ಮದ್ಯ ಖರೀದಿಗೆ ಇರುತ್ತಾ ಮಿತಿ…?

ಬೆಂಗಳೂರು: ಬಾರ್ ಅಂಡ್ ರೆಸ್ಟೊರೆಂಟ್ ತೆರೆಯಲು ಅನುಮತಿ ಇಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಹೊರತುಪಡಿಸಿ ಮದ್ಯದಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

6 ಅಡಿ ಅಂತರ ಕಾಯ್ದುಕೊಳ್ಳಬೇಕು. ಅಂಗಡಿಗಳಲ್ಲಿ 5 ಜನರಿಗೆ ಮಾತ್ರ ಪ್ರವೇಶಾವಕಾಶವಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಅಬಕಾರಿ ಇಲಾಖೆ ರೂಪಿಸಿ ಮದ್ಯ ಮಾರಾಟಕ್ಕೆ ಸಿದ್ಧತೆ ನಡೆಸಲು ಅನುಮತಿ ನೀಡಲಾಗಿದೆ. ರೆಡ್ ಜೋನ್ ಗಳಲ್ಲಿ ಷರತ್ತು ವಿಧಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಿಂಗಲ್ ಶಾಪ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮಾಲ್, ಕಾಂಪ್ಲೆಕ್ಸ್ ಗಳಲ್ಲಿನ ಅಂಗಡಿಗಳಲ್ಲಿ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

ಸೋಮವಾರ ಬೆಳಗ್ಗೆ 9 ರಿಂದ ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲಿ ಮದ್ಯದಂಗಡಿ ಆರಂಭವಾಗಲಿವೆ. ಎಂ.ಆರ್.ಪಿ. ಶಾಪ್ ಮತ್ತು ಎಂಎಸ್ಐಎಲ್ ಶಾಪ್, ಸಿಂಗಲ್ ಮದ್ಯದಂಗಡಿಗಳು ಮಾತ್ರ ಓಪನ್ ಆಗಲಿದ್ದು, ಉಳಿದಂತೆ ಯಾವುದೇ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಆಗುವುದಿಲ್ಲ. ಖರೀದಿಗೆ ಮಿತಿ ಇಲ್ಲ, ಎಷ್ಟು ಬೇಕಾದರೂ ಮದ್ಯ ಖರೀದಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...