alex Certify ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ: 2020-21ನೇ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಅರ್ಹ 18 ವರ್ಷಗಳ ಮೇಲ್ಪಟ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸಾಮಾಜಿಕ ಕ್ರೋಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಘಟಕಕ್ಕೆ: ಪಟ್ಟಣ ವ್ಯಾಪ್ತಿಯಲ್ಲಿ 10 ರಿಂದ 20 ಬಡ ಮಹಿಳೆಯರನ್ನೂಳಗೊಂಡ ಒಟ್ಟು 2 ಸ್ವಸಹಾಯ ಗುಂಪುಗಳನ್ನು ರಚಿಸುವುದು. 18 ರಿಂದ 20 ವರ್ಷದೊಳಗಿರಬೇಕು, ಸದಸ್ಯತ್ವ ಬಯಸುವವರಲ್ಲಿ ಕಡ್ಡಾಯ ಶೇ.70 ರಷ್ಟು ಬಡ ಕುಟುಂಬದವರಾಗಿರಬೇಕು.

ಸ್ವಯಂ ಉದ್ಯೋಗ ಕಾರ್ಯಕ್ರಮ: ಈ ಯೋಜನೆಯಡಿಯಲ್ಲಿ ವೈಯಕ್ತಿಕ ಸ್ವಯಂ ಉದ್ಯೋಗ ಸಾಲ ಕೈಗೊಳ್ಳಲು 2 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರಾಗಿರಬೇಕು. ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು. ಗುಂಪು ಉದ್ಯೋಗ ಸಾಲ ಸೌಲಭ್ಯ ಪಡೆಯಲು ಸ್ತ್ರೀಶಕ್ತಿ ಸಂಘಗಳಾಗಿರಬೇಕು ಮತ್ತು ಬ್ಯಾಂಕ್ ಲಿಂಕೇಜ್ ಮೂಲಕ ಸಾಲ ಸೌಲಭ್ಯ ಪಡೆಯಬಹುದು.

ಬೀದಿ ಬದಿಯ ವ್ಯಾಪಾರಸ್ಥರುಗಳಿಗೆ: ಬೀದಿ ಬದಿ ವ್ಯಾಪಾರಸ್ಥರು ಐಡಿ ಕಾರ್ಡ್ ಪಡೆಯಲು 18 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಇತ್ತೀಚಿನ 3 ಪಾಸ್ ಪೋರ್ಟ್ ಅಳತೆಯುಳ್ಳ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐಡಿ ಕಾರ್ಡ್, ವಿದ್ಯಾರ್ಹತೆ ಮತ್ತು ಬ್ಯಾಂಕ್ ಬುಕ್ ಪಾಸ್ ಪ್ರತಿ ಹಾಗೂ ಇತರೆ ಸೂಕ್ತ ದಾಖಲೆಯೊಂದಿಗೆ ಜುಲೈ 10 ರ ಒಳಗಾಗಿ ಕುಡುತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 08392-248025ಗೆ ಸಂಪರ್ಕಿಸಬೇಕೆಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...