alex Certify ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ನ. 15 ಕೊನೆಯ ದಿನವಾಗಿದೆ. ಜಿಲ್ಲೆಗೆ 24 ಜನರಿಗೆ ಸಾಲ ಸೌಲಭ್ಯ ಮಂಜೂರು ಮಾಡುವ ಗುರಿ ನೀಡಲಾಗಿದ್ದು, ದಾವಣಗೆರೆ ದಕ್ಷಿಣ, ಚನ್ನಗಿರಿ, ಜಗಳೂರು ವಿಧಾನಸಭಾ ಕ್ಷೇತ್ರಗಳಿಗೆ ತಲಾ 4 ಹಾಗೂ ದಾವಣಗೆರೆ ಉತ್ತರ, ಮಾಯಕೊಂಡ, ಹರಿಹರ, ಹೊನ್ನಾಳಿ ಕ್ಷೇತ್ರಗಳಿಗೆ ತಲಾ 3 ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡುವ ಗುರಿ ಇದೆ.

ಆಸಕ್ತ ಅರ್ಹ ವಿಕಲಚೇತನ ಅಭ್ಯರ್ಥಿಗಳು ಯು.ಡಿ.ಐ.ಡಿ ಕಾರ್ಡ್, ಆಧಾರ್ ಕಾರ್ಡ್, ಯೋಜನಾ ವರದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್. ಕಾರ್ಡ್, ನಿವಾಸಿ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263939 ಕ್ಕೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...