alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ದಾವಣಗೆರೆ: ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಬಿತ ಕುಂಟುಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ದಿ, ಉನ್ನತಿ, ಪ್ರೇರಣಾ, ಐರಾವತ, ಸ್ಪೂರ್ತಿ, ಪ್ರಬುದ್ದ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹಿಂದೆ ಅರ್ಜಿ ಸಲ್ಲಿಸಲು ಮೇ 30 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಕೋವಿಡ್-19 ಸಾಂಕ್ರ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಸರ್ಕಾರವು ಕೈಗೊಂಡಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ಜೂನ್ 30 ರವರೆಗೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದವರು ಸೂಚಿಸಿರುವ ಮೇರೆಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಜೂ.30 ರ ಒಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ಪಿ.ಬಿ ರೋಡ್, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...