ಕೋಲಾರ: ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೋಲಾರ ವತಿಯಿಂದ 2020-21 ನೇ ಸಾಲಿನ ಚೇತನ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೋಲಾರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 27 ಒಳಗಾಗಿ ಕಛೇರಿಗೆ ಸಲ್ಲಿಸಬೇಕು.
ದಮನಿತ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ಚೇತನ ಯೋಜನೆಯಡಿ, ಹೆಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಧನಶ್ರೀ ಯೋಜನೆಯಡಿ, ಟ್ರಾನ್ಸ್ ಜೆಂಡರ್ ರವರು ಸ್ವ-ಉದ್ಯೋಗ ಕೈಗೊಳ್ಳಲು ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.