ಗದಗ: 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಿವೆ.
ಸ್ವಯಂ ಉದ್ಯೋಗ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಹಾಗೂ ಭೂ ಒಡೆತನ ಯೋಜನೆಗಳ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಳಾಸಗಳು ಈ ಕೆಳಗಿನಂತಿವೆ- ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ(http://adc.karnataka.gov.in), ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ (https//kmvstdcl.karnataka.gov.in), ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ (http://adijambaava.karnataka.gov.in), ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ (http://banjarathanda.kar.nic.in) ವೆಬ್‌ಸೈಟ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಸಮುದಾಯದವರು ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು. ಅದರಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ (http://ksskdc.kar.nic.in) ವೆಬ್‌ಸೈಟ್‌ಗಳಲ್ಲಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಆ.31 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಆಡಳಿತ ಭವನ, ನೆಲಮಹಡಿ ಕೊಠಡಿ ಸಂಖ್ಯೆ 04, ಗದಗ ದೂರವಾಣಿ ಸಂಖ್ಯೆ 08372-239557 ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.