
ದಾವಣಗೆರೆ: ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ 2019-20ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆ, ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣಾ ಯೋಜನೆ, ಸ್ಪೂರ್ತಿ ಯೋಜನೆ ಪ್ರಬುದ್ದ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವವರು ಜುಲೈ 31 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಗೆ ಅರ್ಜಿಗಳನ್ನು ಮಂಡಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆಯ್ಕೆಯಾದ ಫಲಾನುಭವಿಗಳ ವಿವರಗಳು ಆನ್‍ಲೈನ್‍ನಲ್ಲಿಯೇ ಅನುಮೋದನೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ ದೂ.ಸಂ: 08192-258648ನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.