ಕೋಲಾರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ ಯೋಜನೆ, ಸ್ವಯಂಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ. ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ ಯೋಜನೆಗನ್ನು ಅನುಷ್ಠಾನಗೊಳಿಸಲಾಗಿದೆ.
ಅರ್ಹ ಫಲಾನುಭವಿಗಳಿಂದ ನಿಗಧಿತ ನಮೂನೆಯಲ್ಲಿ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಒಂದು ಬಾರಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ 1ನೇ ಬ್ಲಾಕ್, 1ನೇ ಮಹಡಿ, ಜಿಲ್ಲಾ ಪಂಚಾಯತ್ ಆವರಣ, ಕೋಲಾರ ಇಲ್ಲಿ ಉಚಿತವಾಗಿ ಪಡೆಯಬಹುದು ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯಲ್ಲಿ ನಮೂದಿಸಿರುವಂತಹ ದಾಖಲಾತಿಗಳನ್ನು ಅರ್ಜಿಯೊಂದಿಗೆ ನಿಗಮದ ವೆಬ್‍ಸೈಟ್ ವಿಳಾಸ https://ambigaradevelopment.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಮೇಲ್ಕಂಡ ಕಛೇರಿಗೆ ಆಗಸ್ಟ್ 12 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ವೆಬ್‍ಸೈಟ್ ವಿಳಾಸ https://ambigaradevelopment.karnataka.gov.in ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.