ಹಾಸನ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ 2019-20ನೇ ಸಾಲಿನಲ್ಲಿ ಬಳಕೆಯಾಗದ ಅನುದಾನವನ್ನು ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಗಳಡಿ ವೆಚ್ಚ ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ.
ಆದ್ದರಿಂದ ಸಾರ್ವಜನಿಕರು ಉದ್ಯೋಗ ಮತ್ತು ಕಿರು ಸಾಲ ಯೋಜನೆಗಳಡಿ ಸಾಲ ಮತ್ತು ಸಹಾಯ ಧನ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.