alex Certify ಗುಡ್ ನ್ಯೂಸ್: ಸಾಲ, ಆರ್ಥಿಕ ನೆರವು ಸೇರಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಸಾಲ, ಆರ್ಥಿಕ ನೆರವು ಸೇರಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2020-21 ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಕಾರ್ಯಕ್ರಮಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಸಾಂಪ್ರದಾಯಿಕ ವೃತ್ತಿ ಸಾಲ ಯೋಜನೆಗಳಾಗಿದ್ದು, 18 ರಿಂದ 55 ವರ್ಷಗಳ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ  ರೈತರಾಗಿದ್ದು, ಕನಿಷ್ಟ ಒಂದು ಎಕರೆ ಜಮೀನು ಹೊಂದಿರಬೇಕು.

ಈ ಯೋಜನೆಯಡಿ ವಿಶ್ವಕರ್ಮ ಸಮುದಾಯ ಮತ್ತು ಅದರ ಉಪಜಾತಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಸಾಲ ಸೌಲಭ್ಯ ಪಡೆಯಲು ನಿಗದಿತ ನಮೂನೆ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಆಗಸ್ಟ್-31 ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ 16 ರೊಳಗಾಗಿ  ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಅಶ್ವಿನ್ ನಿವಾಸ, ಎ ಬ್ಲಾಕ್, 2ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ದೂ.ಸಂ. 0182-229634 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...