ಕೋಲಾರ: ಕೆ.ಜಿ.ಎಫ್ ನಗರಸಭೆ ವತಿಯಿಂದ 2020-21ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಯ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ (PM SVANidhi) ಯೋಜನೆಯಡಿ ವಿಶೇಷ ಕಿರು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಬಗ್ಗೆ ನಗರಸಭೆಯ ವತಿಯಿಂದ ವ್ಯಾಪಾರದ ಕಾರ್ಡ್ ಪಡೆದಿರುವ ಅಧಿಕೃತ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂಗಳ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆ ಮತ್ತು ಸಹಾಯ ಧನ ಪಡೆಯಲು ಅರ್ಹ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ನಗರಸಭೆಯಲ್ಲಿ ಜುಲೈ 18 ರ ವರೆಗೆ ಅರ್ಜಿಗಳನ್ನು ಪಡೆಯಬಹುದಾಗಿದೆ. ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 25 ರೊಳಗೆ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಸಂಬಂಧಿಸಿದ ಶಾಖೆಯಿಂದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಕೆ.ಜಿ.ಎಫ್ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.