ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಬಸ್, ಆಟೋ-ಟ್ಯಾಕ್ಸಿ ಸೇರಿದಂತೆ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು.
ಇಂದಿನಿಂದ ಲಾಕ್ಡೌನ್ ಅಂತ್ಯವಾಗಿರುವುದರಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರು ಸೇರಿದಂತೆ ಲಾಕ್ಡೌನ್ ಹೊರತುಪಡಿಸಿದ ಪ್ರದೇಶದಲ್ಲಿ ಬಸ್ ಸಂಚಾರ ಆರಂಭವಾಗಲಿದೆ. ಬುಧವಾರ ಬೆಳಗ್ಗೆಯಿಂದಲೇ ಬಿಎಂಟಿಸಿ ಸಂಚಾರ ಆರಂಭವಾಗಿದ್ದು 1500 ಬಸ್ ಸಂಚರಿಸಲಿವೆ ಎಂದು ಹೇಳಲಾಗಿದೆ.
ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವುದರೊಂದಿಗೆ ಬಸ್ ಗಳಲ್ಲಿ ಪ್ರಯಾಣಿಸಬಹುದು. ರಾಜ್ಯದ ಹಲವೆಡೆಯೂ ಲಾಕ್ಡೌನ್ ಸಡಿಲಿಕೆಯಾಗಿರುವ ಪ್ರದೇಶಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.