ಬೆಂಗಳೂರು: ಈಗಾಗಲೇ ಭಾನುವಾರ ಲಾಕ್ಡೌನ್ ಘೋಷಿಸಿರುವ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್ಡೌನ್ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡುವ ಕುರಿತಾಗಿ ಚರ್ಚೆ ನಡೆದಿದೆ. ರಾಜ್ಯ ರಾಜಧಾನಿಯಲ್ಲಿ ಮತ್ತು ರಾಜ್ಯದಲ್ಲಿ ನಿತ್ಯವೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಕುರಿತಾಗಿ ತಜ್ಞರೊಂದಿಗೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಲಾಕ್ ಡೌನ್ ಜಾರಿ ಮಾಡಬೇಕೆ? ಬೇಡವೇ? ಎನ್ನುವ ಕುರಿತಾಗಿ ವಿಸ್ತೃತ ಚರ್ಚೆ ನಡೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ನಂತರ 12 ದಿನ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ. ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ. ಲಾಕ್ ಡೌನ್ ಜಾರಿ ಮಾಡದೇ ಸೋಂಕು ನಿಯಂತ್ರಣಕ್ಕೆ ತರುವ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ನಂತರ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಎಲ್ಲದಕ್ಕೂ 7ನೇ ತಾರೀಕು ಕಾಯಬೇಕಿದೆ. ಎಲ್ಲವನ್ನು ಮುಖ್ಯಮಂತ್ರಿಗಳು ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.