ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಬೆಂಗಳೂರಿನ ಚಿಕ್ಕಪೇಟೆ ಮತ್ತು ಕನಕಪುರದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ಸ್ವಯಂ ಪ್ರೇರಿತ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಅನೇಕ ಪ್ರದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತ ಪ್ರದೇಶಗಳನ್ನು ಕಂಪ್ಲೀಟ್ ಲಾಕ್ಡೌನ್ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು. ಹೆಚ್ಚಿನ ಪ್ರಕರಣ ಕಂಡುಬಂದ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಲಾಕ್ ಡೌನ್ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.