
ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಳಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋ-ಟ್ಯಾಕ್ಸಿ, ಕ್ಯಾಬ್ ವಾಹನಗಳಿಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೂಡ ಸಂಚರಿಸಲು ಅವಕಾಶ ನೀಡಲಾಗಿದೆ.
ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಂದ ಮನೆಗಳಿಗೆ ತೆರಳಲು ಅನುಮತಿ ನೀಡಲಾಗಿದೆ. ಇದರೊಂದಿಗೆ ನೈಟ್ ಕರ್ಫ್ಯೂ ತೆರವುಗೊಂಡು ದಿನದ 24 ಗಂಟೆಯೂ ಸಂಚಾರಕ್ಕೆ ಅನುಮತಿ ಸಿಕ್ಕಂತಾಗಿದೆ. ಕರ್ಫ್ಯೂ ಅವಧಿಯಲ್ಲಿ ಬಸ್, ಆಟೋ, ಟ್ಯಾಕ್ಸಿ, ಕ್ಯಾಬ್ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತೆರವು ಮಾಡಲಾಗಿದೆ.