ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ರಾಜ್ಯದ ಹಲವೆಡೆ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು ಕೊರೋನಾ ಸ್ಥಿತಿಗತಿಯ ಮಾಹಿತಿ ಪಡೆದುಕೊಂಡು ಜಿಲ್ಲಾವಾರು ಲಾಕ್ಡೌನ್ ಮಾಡುವ ಸಾಧ್ಯತೆ ಇದೆ. ಅಂತರ ಜಿಲ್ಲಾ ಸಂಚಾರಕ್ಕೆ ನಿರ್ಬಂಧ ಹೇರಬಹುದಾಗಿದೆ. ಆದರೆ ಲಾಕ್ಡೌನ್ ಜಾರಿ ಮಾಡುವುದರಿಂದ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೋಂಕಿತ ಪ್ರದೇಶಗಳಲ್ಲಿ ಕಠಿಣ ಕ್ರಮ ಕೈಗೊಂಡು ಉಳಿದಂತೆ ನೈಟ್ ಕರ್ಫ್ಯೂ ಮತ್ತು ಸಂಡೆ ಲಾಕ್ಡೌನ್ ಮುಂದುವರಿಸಬಹುದು ಎಂದು ಹೇಳಲಾಗಿದೆ.