alex Certify ಲಾಕ್ಡೌನ್ ವಿಸ್ತರಣೆಯಾಗುತ್ತಾ…? ಇಲ್ವಾ…? ಸಚಿವ ಸುಧಾಕರ್ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವಿಸ್ತರಣೆಯಾಗುತ್ತಾ…? ಇಲ್ವಾ…? ಸಚಿವ ಸುಧಾಕರ್ ಮಹತ್ವದ ಮಾಹಿತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿರುವ ಲಾಕ್ ಡೌನ್ ಮುಂದುವರೆಯುತ್ತಾ? ಇಲ್ವಾ? ಎಂಬುದರತ್ತ ಜನರು ಹೆಚ್ಚಿನ ಗಮನಹರಿಸಿದ್ದಾರೆ.

ಲಾಕ್ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಇಂದಿನ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ಚರ್ಚೆಯಾಗಿಲ್ಲ ಎಂದರೆ ಲಾಕ್ಡೌನ್ ಮುಂದುವರೆಯುವುದಿಲ್ಲ ಎಂದೇ ಅರ್ಥ. ನಾಳೆ ಮುಖ್ಯಮಂತ್ರಿಯವರು ಸಂಪೂರ್ಣ ವಿವರ ನೀಡಲಿದ್ದಾರೆ. ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...