ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕೊರೋನಾ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕರ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಬೆಂಬಲಿಸುವುದಾಗಿ ಅವರು ತಿಳಿಸಿದ್ದಾರೆ.