ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಜುಲೈ 27 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಬಿ. ಶರತ್ ಅವರು ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ನಿಯಂತ್ರಣದ ಉದ್ದೇಶದಿಂದ 1 ವಾರ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಅದನ್ನು ಜುಲೈ 27 ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.
ಅದೇ ರೀತಿ ಬೆಂಗಳೂರು ಸೇರಿ ವಿವಿಧೆಡೆ 1 ವಾರ ಲಾಕ್ ಡೌನ್ ಜಾರಿ ಮಾಡಿದ್ದು, ವಿಸ್ತರಣೆ ಮಾಡುವ ಕುರಿತು ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.