alex Certify ಮೇ 25 ರ ಬೆಳಗ್ಗೆ 7 ಗಂಟೆವರೆಗೆ ಕೊರೋನಾ ಕರ್ಫ್ಯೂ, ಸಂಪೂರ್ಣ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 25 ರ ಬೆಳಗ್ಗೆ 7 ಗಂಟೆವರೆಗೆ ಕೊರೋನಾ ಕರ್ಫ್ಯೂ, ಸಂಪೂರ್ಣ ಬಂದ್

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ರವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು.

ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇರಬೇಕೆಂದು ತಿಳಿಸಲಾಗಿದೆ.

ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದು, ಲಾಕ್ ಡೌನ್ ನಡುವೆಯೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಶನಿವಾರ ಸಂಜೆ 7 ಗಂಟೆಯಿಂದಲೇ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದೆ. ಪ್ರಸ್ತುತ ಲಾಕ್ಡೌನ್ 4 ಜಾರಿಯಲ್ಲಿದ್ದು ಪ್ರತಿದಿನ ಸಂಜೆ 7 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆಯವರೆಗೆ ಕಂಪ್ಲೀಟ್ ಬಂದ್ ಇರುತ್ತದೆ.

ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ಡೌನ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಹೀಗಾಗಿ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಕಂಪ್ಲೀಟ್ ಬಂದ್ ಆಗಿರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳು ಬಂದ್ ಆಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...