ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಆದೇಶ ಹೊರಡಿಸಲಾಗಿದೆ.
ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮುಂದಿನ ಭಾನುವಾರದಿಂದ ಪ್ರತಿ ಭಾನುವಾರ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಪ್ರತಿ ಶನಿವಾರ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ.
ಅಗತ್ಯ ಸೇವೆ, ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಜಾರಿಗೆ ಮುಂದಾಗಿರುವ ಸರ್ಕಾರ ಪ್ರತಿ ಭಾನುವಾರ ಲಾಕ್ಡೌನ್ ಜಾರಿಗೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ಕೊರೊನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾನುವಾರ ಲಾಕ್ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ.
ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸರಕು-ಸೇವೆಗಳಿಗೆ ಅನುಮತಿ ಇರುತ್ತದೆ. ಅದೇ ರೀತಿ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ತುರ್ತು ಮತ್ತು ಅಗತ್ಯ ಸೇವೆ ಹೊರತುಪಡಿಸಿದ ಎಲ್ಲಾ ಇಲಾಖೆ, ಎಲ್ಲಾ ಸರ್ಕಾರಿ ಇಲಾಖೆ ಕಚೇರಿ ನಿಗಮ ಮಂಡಳಿ ಕಚೇರಿಗಳಿಗೆ ಎರಡನೇ ಶನಿವಾರ ಮತ್ತು 4ನೇ ಶನಿವಾರ ಸೇರಿ ಜುಲೈ 10 ರಿಂದ ಆಗಸ್ಟ್ 8 ರವರೆಗೆ ಎಲ್ಲಾ ಶನಿವಾರವೂ ರಜೆ ನೀಡಲಾಗಿದೆ.