alex Certify ಲಾಕ್ ಡೌನ್ ಪಾಸ್: ಈ ಜಿಲ್ಲೆಗಳ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಪಾಸ್: ಈ ಜಿಲ್ಲೆಗಳ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಲಾಕ್ ಡೌನ್ ನಡುವೆಯೂ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚರಿಸಲು ಅಂತರಜಿಲ್ಲಾ ಪಾಸ್ ಬೇಕಿಲ್ಲವೆಂದು ಹೇಳಲಾಗಿದೆ. ಜನ ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ನಗರ ಒಳಗೊಂಡಂತೆ 6 ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚರಿಸಬಹುದಾಗಿದೆ.

ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಮತ್ತು ಉದ್ಯೋಗಿಗಳಿಗೆ ತಮ್ಮ ಸಂಸ್ಥೆಯ ಅಧಿಕೃತ ಗುರುತಿನ ಚೀಟಿ ಇದ್ದರೆ ಅಂತರಜಿಲ್ಲಾ ಪಾಸ್ ಅವಶ್ಯಕತೆ ಇರುವುದಿಲ್ಲ. ಇದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಈ ವಿನಾಯಿತಿ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...