ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯಾದ್ಯಂತ ಸಂಡೇ ಲಾಕ್ ಡೌನ್ ಜಾರಿ ಮಾಡಲಾಗಿದ್ದು ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕೆಂಗೇರಿ ಚೆಕ್ ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಿ ಪರಿಶೀಲಿಸಿದ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
ಕಾರ್, ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ರಾಜ್ಯದ ಹಲವೆಡೆ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನ ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ. ಮತ್ತೆ ಕೆಲವೆಡೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.