ಬೆಂಗಳೂರು: ಕೊರೊನಾ ಕಂಟ್ರೋಲ್ ಆಗದಿದ್ದರೆ ವಾರದ ನಂತರವೂ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜುಲೈ 14 ರಿಂದ 1 ವಾರ ಲಾಕ್ಡೌನ್ ಜಾರಿ ಮಾಡಲಾಗಿದೆ.
ಅಗತ್ಯ ವಸ್ತು, ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ. ಬೆಂಗಳೂರಿನಲ್ಲಿ ಕೊರೋನಾ ತಡೆಯುವ ಉದ್ದೇಶದಿಂದ 7 ದಿನ ಲಾಕ್ಡೌನ್ ಜಾರಿ ಮಾಡಲಾಗಿದೆ. ಯಾವ ರೀತಿ ನಿಯಂತ್ರಣಕ್ಕೆ ಬರುತ್ತದೆ ಎಂಬುದನ್ನು ನೋಡಿಕೊಂಡು ತಜ್ಞರ ವರದಿ ಪಡೆದು ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು. 2 ದಿನ ಮೊದಲೇ ತಿಳಿಸಲಾಗುವುದು. ಯಾರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಯಾರಾದರೂ ಊರಿಗೆ ಹೋಗುವುದಿದ್ದರೆ ನಾಳೆಯೇ ಹೊರಡಿ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದ್ದು, ಆಗಲೂ ಸೋಂಕು ಹರಡುವುದು ಮುಂದುವರೆದರೆ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ. ಹಿಂದೆಯೂ ಮೊದಲಿಗೆ ಒಂದು ನಂತರದಲ್ಲಿ ತಿಂಗಳು ಹಂತಹಂತವಾಗಿ ಲಾಕ್ ಡೌನ್ ಜಾರಿ ಮಾಡಲಾಗಿತ್ತು.