ಬೆಂಗಳೂರು: ಕೊರೋನಾ ತಡೆಯಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಅದೇ ರೀತಿ ಹಲವು ಜಿಲ್ಲೆಗಳಲ್ಲಿಯೂ ಲಾಕ್ಡೌನ್ ಜಾರಿಯಾಗಿದೆ.
ಲಾಕ್ಡೌನ್ ಜಾರಿಯಾಗಿದ್ದರೂ, ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯ ವಿತರಣೆ ಕಾರ್ಯ ಎಂದಿನಂತೆಯೇ ನಡೆಯಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಸರ್ಕಾರ ಘೋಷಿಸಿರುವಂತೆ ಪಡಿತರ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು.
ಲಾಕ್ಡೌನ್ ಜಾರಿಯಲ್ಲಿದ್ದರೂ ಪಡಿತರ ವಿತರಿಸಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ, ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ 33 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ ವಿತರಿಸಲಾಗುವುದು ಎಂದು ಹೇಳಲಾಗಿದೆ.