ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಆರಂಭದಲ್ಲಿ ಪೂರ್ವ ಸಿದ್ಧತೆಯಿಲ್ಲದೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಜನರ ಆರೋಗ್ಯ ಮತ್ತು ರಾಜ್ಯದ ಆರ್ಥಿಕತೆ ಎರಡೂ ಹಾಳಾಯಿತು.
ಈಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡತೊಡಗಿದೆ. ಹೀಗಾಗಿ ಮತ್ತೆ ಲಾಕ್ಡೌನ್ ಆಗಬೇಕಾಗಿದೆ ಎಂದು ಹೇಳಿದ್ದಾರೆ.