ಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ 4 ಭಾನುವಾರ ಲಾಕ್ ಡೌನ್ ಘೋಷಣೆ ಮಾಡಿದ್ದು, ವೀಕೆಂಡ್ ಶನಿವಾರವೂ ಕೂಡ ಲಾಕ್ ಡೌನ್ ಜಾರಿ ಮಾಡುವ ಕುರಿತಾಗಿ ಚರ್ಚೆ ನಡೆಸಲಾಗುವುದು. ಇದರೊಂದಿಗೆ ಗುತ್ತಿಗೆ ವೈದ್ಯರ ಸೇವೆ ಕಾಯಂಗೊಳಿಸುವ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಬಿಬಿಎಂಪಿ ಸದಸ್ಯರು ಶನಿವಾರವೂ ಲಾಕ್ ಡೌನ್ ಜಾರಿಗೆ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವರೊಂದಿಗಿನ ಸಭೆಯಲ್ಲಿ ಶನಿವಾರವೂ ಲಾಕ್ ಡೌನ್ ಜಾರಿಗೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ನಾಳೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಭಾನುವಾರದ ಲಾಕ್ಡೌನ್ ಜೊತೆಗೆ ಶನಿವಾರವೂ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.