ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ.
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆ ನಿರ್ಬಂಧಿಸಲಾಗುವುದು.
ಅನಗತ್ಯವಾಗಿ ತಿರುಗಾಡುವವರಿಗೆ ದಂಡದ ಜೊತೆಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.