ಬೆಂಗಳೂರು: ಇಂದು ರಾತ್ರಿ 8 ಗಂಟೆಗೆ ನೈಟ್ ಕರ್ಫ್ಯೂ ಜಾರಿಯಾಗುವುದರೊಂದಿಗೆ 33 ಗಂಟೆಗಳ ಲಾಕ್ ಡೌನ್ ಆರಂಭವಾಗಲಿದೆ.
ಎರಡನೇ ಸಂಡೇ ಲಾಕ್ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದೆ. ಯಾರು ಅನಗತ್ಯವಾಗಿ ಓಡಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ದಯಮಾಡಿ ಬೆಂಗಳೂರಿನ ಎಲ್ಲ ಜನ ಸಹಕಾರ ನೀಡಬೇಕು. ಅನವಶ್ಯಕವಾಗಿ ಹೊರಬಂದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆಯುಕ್ತರಾದ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ.
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆ ನಿರ್ಬಂಧಿಸಲಾಗುವುದು.