alex Certify ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡುವುದಾಗಿ ಹೇಳಲಾಗಿತ್ತು. ಆದರೆ, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಮೇ 31 ರ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿ ಮಾಡುವುದಿಲ್ಲ.

ಪ್ರತಿದಿನದಂತೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು. ಸಂಜೆ 7 ರಿಂದ ಬೆಳಗ್ಗೆ 7 ರ ವರೆಗೆ ಕರ್ಫ್ಯೂ ಮುಂದುವರೆಯಲಿದೆ. ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ಇರುತ್ತದೆ. ಉಳಿದಂತೆ ನಾಳೆ ಎಂದಿನಂತೆ ಲಾಕ್ಡೌನ್ ಇರಲಿದೆ.

ಮೇ 24 ರಂದು ಕಳೆದ ಭಾನುವಾರ ಕರ್ಫ್ಯೂ ಮಾದರಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಅದೇ ರೀತಿ ಮೇ 31 ರ ಭಾನುವಾರವೂ ಸಂಪೂರ್ಣ ಲಾಕ್ಡೌನ್ ಜಾರಿ ಮಾಡುವುದಾಗಿ ಹೇಳಲಾಗಿತ್ತು. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮುಂದುವರೆಯಲಿದೆ. ಉಳಿದಂತೆ ಎಲ್ಲಾ ಅಗತ್ಯ ವಸ್ತು, ಸೇವೆ ಮತ್ತು ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾದ ಚಟುವಟಿಕೆಗಳು ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...