ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ಡೌನ್ ಜಾರಿ ಮಾಡಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತು ನಾಳೆ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ನಂತರ ಸಿಎಂ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಅಥವಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ ಮಾಡುವಂತೆ ಮಾಜಿ ಸಚಿವ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದ್ದು ಬೆಂಗಳೂರಿನಂತೆ ಇಲ್ಲೂ ಲಾಕ್ ಡೌನ್ ಮಾಡಿ. ಆರೋಗ್ಯ ಹಾಗೂ ವೈದ್ಯಕೀಯ ಮೂಲಸೌಕರ್ಯ ಸಿದ್ಧತೆ ಮಾಡಿ ಸೂಕ್ತ ಸಮಯ ನೋಡಿ ಪೂರಕ ಯೋಜನೆಯ ಅನುಷ್ಠಾನ ಮಾದರಿ ಸಿದ್ದಪಡಿಸಿದ ಬಳಿಕವಷ್ಟೇ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.