
ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ಡೌನ್ ಘೋಷಿಸಲಾಗಿದೆ.
ಇದರೊಂದಿಗೆ ದಕ್ಷಿಣ ಕನ್ನಡ, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಿಂದ ಲಾಕ್ಡೌನ್ ಜಾರಿಯಾಗಲಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ಡೌನ್ ಜಾರಿಯಾಗಲಿದ್ದು, ಧಾರವಾಡ ಜಿಲ್ಲೆಯಲ್ಲಿ ಜುಲೈ 15ರಿಂದ ಜಾರಿ ಮಾಡಲಾಗುವುದು. ಅದೇ ರೀತಿ ಉಡುಪಿ, ಬೀದರ್, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಲಾಕ್ಡೌನ್ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.