alex Certify ಲಾಕ್ಡೌನ್ ಕರ್ಫ್ಯೂ: ಅನಗತ್ಯವಾಗಿ ಅಡ್ಡಾಡುವವರಿಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಕರ್ಫ್ಯೂ: ಅನಗತ್ಯವಾಗಿ ಅಡ್ಡಾಡುವವರಿಗೆ ‘ಬಿಗ್ ಶಾಕ್’

ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಯಿಂದ ಎಲ್ಲೆಡೆ ಹದ್ದಿನಕಣ್ಣು ಇಡಲಾಗಿದೆ. ಪ್ರಮುಖ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು ಈ ಮೊದಲೇ ಭಾನುವಾರ ಸಂಪೂರ್ಣ ಲಾಕ್ ಡೌನ್ ಸೂಚನೆ ನೀಡಿದ್ದರಿಂದ ಹೆಚ್ಚಿನವರು ಮನೆ ಸೇರಿಕೊಂಡಿದ್ದಾರೆ.

ಲಾಕ್ ಡೌನ್ ವೇಳೆಯಲ್ಲೂ ಕೆಲವರು ಅನಗತ್ಯವಾಗಿ ತಿರುಗಾಟ ನಡೆಸಿದಲ್ಲಿ ಬಿಸಿ ಮುಟ್ಟಿಸಲು ಪೊಲೀಸರು ಸಜ್ಜಾಗಿದ್ದಾರೆ. ಎಲ್ಲಾ ರಸ್ತೆಗಳಲ್ಲಿ ಸಂಚಾರವನ್ನು ಬಂದ್ ಮಾಡಲಾಗಿದೆ. ಮನೆಯಿಂದ ಯಾರು ಹೊರ ಬರದಂತೆ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಹೊರಬಂದವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...