ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ಜಾರಿ ಮಾಡಿದ್ದರೂ ಕೆಲವೊಂದು ವಿನಾಯಿತಿ ನೀಡಲಾಗಿದೆ.
ವಲಸೆ ಕಾರ್ಮಿಕರಿಗೆ ರಿಲೀಫ್ ನೀಡಲಾಗಿದ್ದು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಗೆ ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ.
ಸ್ಥಳೀಯ ಮಳಿಗೆಗಳು, ಬೃಹತ್ ಇಟ್ಟಿಗೆ ಮತ್ತು ಗಾರೆ ಅಂಗಡಿಗಳು ಅಥವಾ ಇ-ಕಾಮರ್ಸ್ ಕಂಪನಿಗಳ ಮೂಲಕ ಅತ್ಯವಶ್ಯಕ ವಸ್ತುಗಳ ಉತ್ಪಾದನೆ ಅಥವಾ ಚಿಲ್ಲರೆ ಮಾರಾಟ ಯಾವುದೇ ಆಗಿರಲಿ ವಸ್ತುಗಳ ಪೂರೈಕೆ ಎಲ್ಲ ಸೌಲಭ್ಯಗಳನ್ನು ಮತ್ತು ನಿರ್ವಹಣೆಗಾಗಿ ಇರುವ ರಾಷ್ಟ್ರೀಯ ಕೋವಿಡ್ -19 ನಿರ್ದೇಶನಗಳನ್ನು ಪಾಲಿಸುವುದಕ್ಕೆ ಒಳಪಟ್ಟು ಸರಬರಾಜು ಮಾಡಲು ಅವಕಾಶ ನೀಡಲಾಗಿದೆ.
ಬೆಂಗಳೂರು ಪ್ರದೇಶದ ವ್ಯಾಪ್ತಿಯ ಒಳಗೆ ಹೊರಗಿನಿಂದ ಕಾರ್ಮಿಕರನ್ನು ಕರೆ ತರದೆ ಸ್ಥಳೀಯವಾಗಿಯೇ ಇರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಯೋಜನೆಗಳ ಕಾಮಗಾರಿ ಮುಂದುವರಿಸಬಹುದಾಗಿದೆ ಎಂದು ಹೇಳಲಾಗಿದೆ.