ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಕಳೆದ 38 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 406.73 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಪೈಕಿ ಮದ್ಯ ಜಪ್ತಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 177 ಕೋಟಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. 11.24 ಕೋಟಿ ರೂ ಮೌಲ್ಯದ ಮಾದಕ ವಸ್ತು, 59 ಕೋಟಿ ರೂ ಮೌಲ್ಯದ ಬೆಳ್ಳಿ, ಬಂಗಾರ ಹಾಗೂ ಡೈಮಂಡ್, 8.14 ಕೋಟಿ ಮೌಲ್ಯದ ಉಡುಗೊರೆಗಳಾದ ಮಿಕ್ಸರ್, ಫ್ಯಾನ್, ಕುಕ್ಕರ್ ಜಪ್ತಿ ಮಾಡಲಾಗಿದೆ.
72 ಕೋಟಿ ಮೌಲ್ಯದ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ನೂರಾರು ಕೋಟಿ ಹಣದ ಜೊತೆಗೆ ದೇಶದಲ್ಲೇ ಅತಿ ಹೆಚ್ಚು ಮದ್ಯ ರಾಜ್ಯದಲ್ಲಿ ಜಪ್ತಿಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.