ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲು ಸರ್ಕಾರ ಮುಂದಾಗಿದೆ.
ಗಲಭೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದವರಿಂದ ನಷ್ಟ ವಸೂಲಿ ಮಾಡಲು ಕ್ರಮಕೈಗೊಳ್ಳಲಾಗಿದೆ. ಎಫ್ಐಆರ್ ಆಧಾರದ ಮೇಲೆ ನಷ್ಟದ ಅಂದಾಜು ಮಾಡಲು ಹೆಚ್ಚುವರಿ ಇನ್ಸ್ಪೆಕ್ಟರ್ ಜನರಲ್ ದರ್ಜೆ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಉತ್ತರಪ್ರದೇಶ ಮಾದರಿಯಲ್ಲಿ ಗಲಭೆಕೋರರರಿಂದಲೇ ಹಾನಿಯ ನಷ್ಟ ವಸೂಲಿ ಮಾಡಲಾಗುವುದು ಎಂದು ಸಚಿವರು ಈಗಾಗಲೇ ಹೇಳಿದ್ದಾರೆ.