
ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ.
ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.