ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ನಡೆದಿದೆ.
ರಾಘವಪುರದ 40 ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಪ್ರಿಯಕರ ಕೊಲೆ ಮಾಡಿದ ಆರೋಪ ಕೇಳಿಬಂದಿದ್ದು ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ ಪತ್ನಿ ಮೃತದೇಹವನ್ನು ಕಳಲೆ ಸಮೀಪ ಕಾಲುವೆಗೆ ಎಸೆದಿದ್ದಾರೆ.
ಮೈಸೂರಿಗೆ ಹೋಗಿದ್ದ ಪತಿ ನಾಪತ್ತೆಯಾಗಿರುವುದಾಗಿ ಸೆಪ್ಟಂಬರ್ 16 ರಂದು ಬೇಗೂರು ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಗಂಡನನ್ನು ಕೊಲೆ ಮಾಡಿರುವ ಬಗ್ಗೆ ಮಹಿಳೆ, ಪ್ರಿಯಕರ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.