alex Certify ಕಾಮದಾಹಕ್ಕೆ ಪ್ರೀತಿಸಿ ಮದುವೆಯಾದ ಪತಿಯನ್ನೇ ಕೊಂದ ಕೊಲೆಗಾತಿ: ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದಾಹಕ್ಕೆ ಪ್ರೀತಿಸಿ ಮದುವೆಯಾದ ಪತಿಯನ್ನೇ ಕೊಂದ ಕೊಲೆಗಾತಿ: ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾದೇಶ್ ಕೊಲೆಯಾದ ವ್ಯಕ್ತಿ. ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಹಾರಗದ್ದೆಯಲ್ಲಿ ಅಕ್ಟೋಬರ್ 17 ರಂದು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಮಾದೇಶ್ ಕೊಲೆ ಮಾಡಲಾಗಿತ್ತು. ಆತನ ಕುಟುಂಬದವರು ಜಿಗಣಿ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೃತ ಮಾದೇಶನ ಪತ್ನಿ, ಆಕೆಯ ಪ್ರಿಯಕರ ಮತ್ತು ಕೊಲೆಗೆ ಸಹಕಾರ ನೀಡಿದ ಪ್ರಿಯಕರನ ಸ್ನೇಹಿತನನ್ನು ಬಂಧಿಸಲಾಗಿದೆ. ತಮಿಳುನಾಡು ಮೂಲದ ಮಾದೇಶ್ ಮತ್ತು ಆತನ ಪತ್ನಿ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಾರೆ. ಕೆಲಸ ಹುಡುಕಿಕೊಂಡು ಬಂದಿದ್ದ ಅವರು ಜಿಗಣಿಯಲ್ಲಿ ವಾಸವಾಗಿದ್ದರು.

ಲಾಕ್ಡೌನ್ ಸಂದರ್ಭದಲ್ಲಿ ದಂಪತಿ ತಮಿಳುನಾಡಿಗೆ ಹೋಗಿದ್ದು ಅಲ್ಲಿ ಮಾದೇಶನ ಪತ್ನಿಗೆ ಬೇರೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆದಿದೆ. ಲಾಕ್ಡೌನ್ ಮುಗಿದ ಕೆಲಸಕ್ಕೆ ವಾಪಸಾದರೂ ಆಕೆ ಪ್ರಿಯಕರನೊಂದಿಗೆ ಜೀವನ ನಡೆಸಲು ನಿರ್ಧರಿಸಿದ್ದಾಳೆ. ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾಳೆ.

ಪ್ರಿಯಕರ, ಆತನ ಸ್ನೇಹಿತನ ಜೊತೆ ಸೇರಿ ಮಾದೇಶನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...